ಯೋಗಿ ಆದಿತ್ಯನಾಥ್ ವಿರುದ್ಧ ಹೇಳಿಕೆ: ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ

ಬೆಂಗಳೂರು: ಏ-15; ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್‌ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಕುಂಡುರಾವ್‌ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ದಿನೇಶ್‌ ಗುಂಡುರಾವ್‌ ಹೇಳಿಕೆ ಖಂಡಿಸಿ ಬಿಜೆಪಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಸಂಸದೆ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ದಿನೇಶ್‌ ಗುಂಡುರಾವ್‌ ವಿರುದ್ಧ ತೀವ್ರವಾಗಿ ಕಿಡಿ ಕಾರಿದ್ದಾರೆ.

ನಾಥ ಪಂಥದ ಓರ್ವ ಸಂತನ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿರುವುದು ಕಾಂಗ್ರೆಸ್‌ ಸಂಸ್ಕೃತಿ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಪ್ರತಿಭಟನೆ ಬಳಿಕ ಉಪಮುಖ್ಯ ಚುನಾವಣಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿಗೆ ದೂರು ಸಲ್ಲಿಸಿ, ದಿನೇಶ್ ಗುಂಡೂರಾವ್ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಸಂವಿಧಾನ ಬದ್ದವಾಗಿ ಅಧಿಕಾರ ಸ್ವೀಕರಿದ ಒಬ್ಬ ವ್ಯಕ್ತಿ ಈ ರೀತಿ ಮಾತಾಡಬಾರದಿತ್ತು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗವೇ ದಿನೇಶ್ ಗುಂಡೂರಾವ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಅವರನ್ನು ಬಂಧಿಸಬೇಕಿತ್ತು. ಆದರೆ ಕ್ರಮಕೈಗೊಳ್ಳದ ಕಾರಣದಿಂದ ನಾವೇ ದೂರು ನೀಡಿದ್ದೇವೆ ಎಂದಿದ್ದಾರೆ.

BJP,Protest,Dinesh gundurao,UP CM Yogi adithyanath

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ