ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕನೊಬ್ಬ ಸಾವು

ಮಂಡ್ಯ,ಏ.15- ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೇಲುಕೋಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ವಿನಯ್(40) ಮೃತಪಟ್ಟ ಕೂಲಿ ಕಾರ್ಮಿಕ.
ನೀಲನಹಳ್ಳಿ ಗೇಟ್ ಬಳಿ ಮೈಸೂರು-ಬೀದರ್ ರಾಷ್ಟ್ರೀಯ ಹೆದ್ದಾರಿ ನವೀಕರಣ ಕಾಮಕಾರಿ ನಡೆಯುತ್ತಿದ್ದು, ಕಳೆದ ಗುರುವಾಗ ಕಾಮಗಾರಿಗೆ ಜಲ್ಲಿಕಲ್ಲು ಸಾಗಿಸುತ್ತಿದ್ದಾಗ ಟಿಪ್ಪರ್ ಲಾರಿ ಕೆಲಸ ಮಾಡುತ್ತಿದ್ದ ವಿನಯ್‍ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು, ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಬಗ್ಗೆ ಮೇಲುಕೋಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ