ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ದಿ ಕೆಲಸಗಳಾಗಿಲ್ಲ: ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಟೀಕೆ

ಮೈಸೂರು,ಏ.15- ಕಳೆದ ಐದು ವರ್ಷದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ದಿ ಕೆಲಸಗಳಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾಸಕ ಜಿ.ಟಿ.ದೇವೇಗೌಡರ ಪರ 2ನೇ ದಿನ ಪ್ರಚಾರ ಕೈಗೊಂಡಿದ್ದ ವೇಳೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಜನಪರ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿಲ್ಲ. ನಾನು 20 ತಿಂಗಳು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರೂ ಮಾಡದಂತಹ ಅಭಿವೃದ್ದಿ ಕೆಲಸವನ್ನು ಮಾಡಿರುವುದಾಗಿ ಹೇಳಿದರು.

ನಾಡಿನ ಜನರ ಆಶೀರ್ವಾದದಿಂದ ಜೆಡಿಎಸ್ ಅಧಿಕಾರಕ್ಕೆ ಬಂದು ತಾವು ಮತ್ತೆ ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ ಬಾಣಂತಿಯರಿಗೆ ವೃದ್ದರಿಗೆ ತಲುಪುವಂತಹ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡಿದರು.

ಕಳೆದ 10 ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷಗಳನ್ನ ರಾಜ್ಯದಲ್ಲಿ ಅಧಿಕಾರಕ್ಕೆ ತರಲಾಗಿದೆ. ಈ ಬಾರಿ ಜಿ.ಟಿ.ದೇವೇಗೌಡರನ್ನು ಈ ಕ್ಷೇತ್ರದಲ್ಲಿ ಆಯ್ಕೆ ಮಾಡುವ ಮೂಲಕ ಮತ್ತೆ ನಾನು ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿ ಪಾಳ್ಯ, ಉದ್ದೂರು ಗ್ರಾಮಗಳಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ತೆರೆದ ವಾಹನದಲ್ಲಿ ತೆರಳಿ ಕುಮಾರಸ್ವಾಮಿ ಮತಯಾಚನೆ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ