ಇನ್ನೆರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು,ಏ.15- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಇನ್ನೆರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿದ್ದು , ಬೆಂಗಳೂರು ಹಾಗೂ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾತಾವರಣದಲ್ಲಿ ಕೆಲವೊಂದು ಬದಲಾವಣೆಗಳು ಕಂಡುಬಂದಿದ್ದು , ಉಡುಪಿ, ಹಾಸನ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಆದರೆ ಬೆಂಗಳೂರು ಸುತ್ತಮುತ್ತ ಮೋಡ ಮುಸುಕಿದ ವಾತಾವರಣ ಮುಂದುವರೆಯಲಿದ್ದು , ಮಳೆಯಾಗುವ ಸಾಧ್ಯತೆ ಕಡಿಮೆಯಿದೆ. ಒಂದೆರಡು ಕಡೆ ಚದುರಿದಂತೆ ಸಾಧಾರಣ ಮಳೆಯಾಗಬಹುದು ಎಂದು ಹೇಳಿದರು.
ಬೇಸಿಗೆಯಲ್ಲಿ ಹಾಗಾಗಿ ಅಕಾಲಿಕ ಮಳೆಯಾಗುವುದು ಸಹಜ. ಅದರಂತೆ ಏಪ್ರಿಲ್, ಮೇ ತಿಂಗಳಿನಲ್ಲೂ ಕೆಲವೆಡೆ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ