ಬೆಂಬಳೂರು,ಏ.16
ಮೇ 12ಕ್ಕೆ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.
ನಿನ್ನೆ ರಾತ್ರಿ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ನಿನ್ನೆ ರಾತ್ರಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 2ನೇ ಪಟ್ಟಿ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ.
2ನೇ ಪಟ್ಟಿಯನ್ನು ಅಳೆದು ತೂಗಿ ಲೆಕ್ಕಾ ಹಾಕಿ ಸಿದ್ಧಪಡಿರುವ ಬಿಜೆಪಿ, ಇಂದು ಬೆಳಿಗ್ಗೆ 11 ಗಂಟೆ 2ನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
2 ನೇ ಪಟ್ಟಿಯಲ್ಲಿ ಸುಮಾರು 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ನಿರೀಕ್ಷೆ ಇದ್ದು, ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಕಾರ್ಯದರ್ಶಿ ಜಗತ್ ಪ್ರಕಾಶ್ ನಡ್ಡಾ ಅವರು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಬಿಜೆಪಿ 2ನೇ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.