ಸಿಲಿಂಡರ್‍ನ ರೆಗ್ಯುಲೇಟರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರಿಗೆ ಗಯಾ

ಬೆಂಗಳೂರು,ಏ.16-ಸಿಲಿಂಡರ್‍ನ ರೆಗ್ಯುಲೇಟರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದು , ಹಲವಾರು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಂದಿನಿ ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಲಗ್ಗೆರೆಯ ಚರ್ಚ್ ಸ್ಟ್ರೀಟ್ ನಿವಾಸಿ ಮಹಾಲಕ್ಷ್ಮಿ(65) ಎಂಬುವರು ಗಾಯಗೊಂಡಿದ್ದು , ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ 8.45ರಲ್ಲಿ ಮಹಾಲಕ್ಷ್ಮಿ ಅವರು ಸಿಲಿಂಡರ್‍ನ ರೆಗ್ಯುಲೇಟರ್ ಬದಲಿಸುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಮನೆಯಲ್ಲಿದ್ದ ಐದು ಮಂದಿ ಹೊರಗೆ ಓಡಿ ಪ್ರಾಣ ರಕ್ಷಿಸಿಕೊಂಡಿದ್ದು, ಅಡುಗೆ ಮನೆಯಲ್ಲಿದ್ದ ಮಹಾಲಕ್ಷ್ಮಿ ಅವರು ಗಾಯಗೊಂಡಿದ್ದು, ತಕ್ಷಣ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿಯಿಂದಾಗಿ ಮನೆಯಲ್ಲಿದ್ದ ಪೀಠೋಪಕರಣಗಳು ಹಾನಿಗೀಡಾಗಿದೆ. ನಂದಿನಿ ಲೇಔಟ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ