ಚಿಕ್ಕಮಗಳೂರು,ಏ.16
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕಾಂಗ್ರೆಸ್ ಮುಖಂಡರ ಮನೆಗಳ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಮುರುಳಿ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರಾದ ಸುಬ್ರಹ್ಮಣ್ಯ ಶೆಟ್ಟಿ ಮತ್ತು ಸತೀಶ್ ಎಂಬವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಕೊಪ್ಪದ ತಿಲಕ್ ನಗರದ ಬಳಿ ಇರುವ ಸುಧೀರ್ ಅವರ ಮನೆ ಮೇಲೆ ದಾಳಿ ನಡೆದಿದೆ.
ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಕೊಪ್ಪದಲ್ಲಿ ಐಟಿ ದಾಳಿ ನಡೆದಿದ್ದು, ಐಟಿ ಅಧಿಕಾರಿಗಳು ಮೂವರು ಕಾಂಗ್ರೆಸ್ ಮುಖಂಡರ ಮನೆಯಲ್ಲಿ ದಾಖಲೆ ಪತ್ರ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.