ಬೆಂಗಳೂರು,ಏ.16-ಜೆಡಿಎಸ್ ಕಾನೂನು ಘಟಕದ ವತಿಯಿಂದ ನಳೆ ರಾಜ್ಯ ಮಟ್ಟದ ಬೃಹತ್ ವಕೀಲರ ಸಮಾವೇಶವನ್ನು ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ನಡೆಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖಂಡರಾದ ಪಿ.ಜಿ.ಆರ್.ಸಿಂಧ್ಯಾ, ಎಚ್.ವಿಶ್ವನಾಥ್, ಎಚ್.ಡಿ.ರೇವಣ್ಣ , ಬಸವರಾಜು ಹೊರಟಿ, ಡಿ.ಎಂ.ಫಾರೂಖ್, ಬಿ.ಬಿ.ನಿಂಗಯ್ಯ, ನಾರಾಯಣರಾವ್, ಮಧುಬಂಗಾರಪ್ಪ , ರಮೇಶ್ ಬಾಬು ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಸ್ತುತ ಸನ್ನಿವೇಶದಲ್ಲಿ ಜನತಂತ್ರ ರಕ್ಷಣೆಯಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ. ನ್ಯಾಯಾಂಗ ವ್ಯವಸ್ಥೆಯ ಪಾರದರ್ಶಕತೆ ಮತ್ತು ಸ್ವತಂತ್ರವನ್ನು ರಕ್ಷಿಸುವ ಜವಾಬ್ದಾರಿ ವಕೀಲ ಸಮುದಾಯದ ಮೇಲೆ ಇರುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಸಮಾವೇಶವನ್ನು ಏರ್ಪಡಿಸಲಾಗಿದ್ದು, ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸುವ ಅಗತ್ಯವಿದೆ.
ಹೀಗಾಗಿ ಅರಮನೆ ಮೈದಾನದಲ್ಲಿ ವಕೀಲರ ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ತಾವೆಲ್ಲರೂ ಇದರಲ್ಲಿ ಭಾಗವಹಿಸಬೇಕೆಂದು ರಂಗನಾಥ್ ಮನವಿ ಮಾಡಿದ್ದಾರೆ.