ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 82 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-16: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾರ್ಯ ಚುರುಕು ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಈಗ ಬಿಜೆಪಿಯು ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎರಡನೇ ಪಟ್ಟಿಯಲ್ಲಿ 82 ಮಂದಿಗೆ ಟಿಕೆಟ್ ಘೋಷಿಸಲಾಗಿದೆ.

ಕಳೆದ ವಾರ ಬಿಜೆಪಿ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇಂದು 82 ಅಭ್ಯರ್ಥಿಗಳನ್ನು ಒಳಗೊಂಡ ಎರಡನೇ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ. ಒಟ್ಟು 154 ಅಭ್ಯರ್ಥಿಗಳ ಹೆಸರು ಅಂತಿಮಗೊಂಡತಾಗಿದ್ದು, ಮತ್ತೊಂದು ಪಟ್ಟಿ ಬಿಡುಗಡೆಯನ್ನು ಬಿಜೆಪಿ ಕಾಯ್ದಿರಿಸಿದೆ.

ಶಿವಾಜಿನಗರದಿಂದ ಕಟ್ಟಾ ಸುಬ್ರಮಣ್ಯ ನಾಯ್ಡು, ಸಾಗರದಿಂದ ಹರತಾಳು ಹಾಲಪ್ಪ, ಸೊರಬದಿಂದ ಕುಮಾರ್ ಬಂಗಾರಪ್ಪ, ತೀರ್ಥಹಳ್ಳಿಯಿಂದ ಅರಗ ಜ್ಞಾನೇಂದ್ರ, ಹೊನ್ನಾಳಿಯಿಂದ ಎಂ.ಪಿ.ರೇಣುಕಾಚಾರ್ಯ, ಶಾಂತಿ ನಗರದಿಂದ ವಾಸುದೇವ ಮೂರ್ತಿ, ಬಳ್ಳಾರಿಯಿಂದ ಸಣ್ಣ ಫಕೀರಪ್ಪ, ತುರುವೇಕೆರೆಯಿಂದ ಮಸಾಲೆ ಜಯರಾಂ ಸೇರಿ ಪ್ರಮುಖ ಹಳಬರಿಗೆ ಎರಡನೇ ಪಟ್ತಿಯಲ್ಲಿ ಮಣೆ ಹಾಕಲಾಗಿದೆ.


karnataka assembly election,BJP,releases second list of 82 candidates

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ