ಬೆಂಗಳೂರು,ಏ.16-ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಆಂಧ್ರಪ್ರದೇಶದಲ್ಲಿ ನೀಡಿರುವ ಬಂದ್ ಕರೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಆಂಧ್ರಪ್ರದೇಶದ ಗಡಿಪ್ರದೇಶದವರಿಗೆ ಮಾತ್ರ ರಾಜ್ಯದ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿವೆ. ಮುನ್ನಚ್ಚರಿಕೆ ಕ್ರಮವಾಗಿ ಆಂಧ್ರಪ್ರದೇಶದಲ್ಲಿ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಮೂಲಗಳು ತಿಳಿಸಿವೆ.
ಬಂದ್ ಸಂದರ್ಭದಲ್ಲಿ ಕಲ್ಲು ತೂರಾಟ, ಬೆಂಕಿ ಹಚ್ಚುವುದು ಇತ್ಯಾದಿಗಳು ನಡೆಯುವ ಸಾಧ್ಯತೆಗಳಿರುವುದರಿಂದ ಬಸ್ಗಳಿಗೆ ಹಾನಿ ಉಂಟಾಗುವುದನ್ನು ತಡೆಯುವ ಉದ್ದೇಶದಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೆಎಸ್ಆರ್ಟಿಸಿ ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳ ಬಸ್ ಸಂಚಾರವನ್ನು ಆಂಧ್ರಪ್ರದೇಶದ ಗಡಿಯವರಿಗೆ ಮಾತ್ರ ಸೀಮಿತಗೊಳಿಸಲಾಗಿದೆ.
ಆಂಧ್ರಪ್ರದೇಶದಲ್ಲಿನ ಪರಿಸ್ಥಿತಿ ತಿಳಿಗೊಂಡ ಮೇಲೆ ಮತ್ತೆ ಎಂದಿನಂತೆ ಬಸ್ ಸಂಚಾರ ಆರಂಭಿಸುವ ಬಗ್ಗೆ ತೀರ್ಮಾನಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.