ಬೆಂಗಳೂರು, ಏ.16-ರಾಜಾಜಿನಗರ ಕ್ಷೇತ್ರದಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಂಜುಳಾ ನಾಯ್ಡು ಘೋಷಣೆ ಮಾಡುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.
ರಾಜಾಜಿನಗರ ಕ್ಷೇತ್ರದಲ್ಲಿ ಮಾಜಿ ಮೇಯರ್ ಪದ್ಮಾವತಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇದನ್ನು ಪ್ರತಿಭಟಿಸಿ ಇಂದು ಕೆಪಿಸಿಸಿ ಕಚೇರಿ ಮುಂದೆ ಮಂಜುಳಾ ಅವರು ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.
ಪಕ್ಷವಿರೋಧಿ ಕೆಲಸ ಮಾಡಿದವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಕಾಂಗ್ರೆಸ್ ಗೆ ಕೆಟ್ಟ ಹೆಸರು ಬರುತ್ತದೆ. ಏನೇ ಆದರೂ ತಾವು ಚುನಾವಣೆಯಿಮದ ಹಿಂದೆ ಸರಿಯುವುದಿಲ್ಲ. ಸೋನಿಯಾಗಾಂಧಿ, ರಾಹುಲ್ಗಾಂಧಿ ಹೆಸರಿನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.