ಕೊನೆಗೂ ಸಿಕ್ತು ನಾಗಮಾರಪಳ್ಳಿಗೆ ಟಿಕೆಟ್
ಬೀದರ್: ಬಿಜೆಪಿ ಬಿಡುಗಡೆ ಮಾಡಿರುವ ಎರಡನ ಪಟ್ಟಿಯಲ್ಲಿ ಜಿಲ್ಲೆಯ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯಥರ್ಿಗಳನ್ನು ಘೋಷಣೆ ಮಾಡಲಾಗಿದೆ. ಬೀದರ್ ಉತ್ತರ ಕ್ಷೇತ್ರದಿಂದ ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಭಾಲ್ಕಿಯಿಂದ ಡಿ.ಕೆ. ಸಿದ್ರಾಮಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಸೂರ್ಯಕಾಂತ ನಾಗಮಾರಪಳ್ಳಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ನಗರದಲ್ಲಿ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಸೂರ್ಯಕಾಂತ ಸಹೋದರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಕಾಂಗ್ರೆಸ್ನಿಂದ ಹಾಲಿ ಶಾಸಕ ರಹೀಮಖಾನ್ ಟಿಕೆಟ್ ಘೋಷಣೆ ಮಾಡಲಾಗಿದೆ.
ಪ್ರಬಲವಾಗಿರುವ ರಹೀಮಖಾನ್ ಚುನಾವಣೆಗೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಇವರಿಗೆ ಮಣಿಸಲು ಬಿಜೆಪಿ ವರಿಷ್ಠರು ಯುವ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಟಿಕೆಟ್ ಕೊಟ್ಟಿದ್ದು ಗಮನಾರ್ಹ. ಕಳೆದ ಹಲವು ವರ್ಷಗಳಿಂದ ಸೂರ್ಯಕಾಂತ ಕ್ಷೇತ್ರ ಕೇಂದ್ರವಾಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಎಲ್ಲ ಊರುಗಳಲ್ಲಿಯೂ ನೆಟ್ವಕರ್್ ಮಾಡಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಟಕ್ಕರ್ ನೀಡಲು ವರಿಷ್ಠರು ನಾಗಮಾರಪಳ್ಳಿ ಅವರೇ ಸೂಕ್ತ ಎಂದಿರುವುದು ಗಮನಾರ್ಹ.