ಬೆಂಗಳೂರು,ಏ.16-ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ ಅದರಲ್ಲಿದ್ದ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಂಪಿನಗರದ 4ನೇ ಕ್ರಾಸ್, 4ನೇ ಮುಖ್ಯರಸ್ತೆಯ ನಿವಾಸಿ ಅಪೂರ್ವ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ನಿನ್ನೆ ಬೆಳಗ್ಗೆ ಕುಟುಂಬದವರೆಲ್ಲ ಹೊರಗೆ ಹೋಗಿದ್ದಾಗ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಕಳ್ಳತನ ಮಾಡಿ ಪರಾರಿಯಾರಿದ್ದಾರೆ.
ತಡರಾತ್ರಿ ಅಪೂರ್ವ ಕುಟುಂಬದವರು ಮನೆಗೆ ವಾಪಸ್ಸಾದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದು ತಕ್ಷಣ ಪೆÇಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.