ಯೋಗಿ ಆದಿತ್ಯನಾಥ್ ಅವರ ವಿರುದ್ಧ ಹೇಳಿಕೆ : ದಿನೇಶ್‍ಗುಂಡೂರಾವ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಪಿ.ಜ್ಯೋತಿಗಣೇಶ್

ತುಮಕೂರು, ಏ.16-ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಹೇಳಿಕೆ ನೀಡಿರುವ ದಿನೇಶ್‍ಗುಂಡೂರಾವ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಪಿ.ಜ್ಯೋತಿಗಣೇಶ್ ಒತ್ತಾಯಿಸಿದ್ದಾರೆ.
ನಗರದ ಟೌನ್‍ಹಾಲ್ ವೃತ್ತದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ವಿರುದ್ಧ ಹೇಳಿಕೆ ನೀಡಿರುವುದು ಖಂಡನೀಯ. ತಕ್ಷಣವೇ ರಾಜ್ಯಪಾಲರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಪೆÇಲೀಸರು ಇವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
ಸಚಿವರಾಗಿರುವ ದಿನೇಶ್‍ಗುಂಡೂರಾವ್ ಅವರು ಹೀಗೆ ಮಾತನಾಡಬಾರದು. ಸಾಮಾನ್ಯ ಜ್ಞಾನವಿಲ್ಲದಂತೆ ವರ್ತಿಸಿದ್ದಾರೆ. ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಹೇಳಿದರು.
ಈ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಸಿಗಬೇಕಾದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ ಮಾತ್ರ ಅದು ಸಾಧ್ಯ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಹೆಬ್ಬಾಕದ ರವಿ, ನಾಗರಾಜ್ ಸೇರಿದಂಎ ಮತ್ತಿತರರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ