ವಿವಾಹ ಸಮಾರಂಭ ನಡೆಯುತ್ತಿದ್ದ ವೇಳೆ 7 ವರ್ಷದ ಬಾಲಕಿ ಮೇಲೆ 19 ವರ್ಷದ ಯುವಕ ಅತ್ಯಾಚಾರ :

ಲಕ್ನೋ, ಏ.17-ಕತುವಾ, ಉನ್ನಾವೊ ಮತ್ತು ಸೂರತ್ ಅತ್ಯಾಚಾರ ಘಟನೆ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿರುವಾಗಲೆ ಮತ್ತೊಂದು ಭೀಕರ ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿವಾಹ ಸಮಾರಂಭ ನಡೆಯುತ್ತಿದ್ದ ವೇಳೆ 7 ವರ್ಷದ ಬಾಲಕಿ ಮೇಲೆ 19 ವರ್ಷದ ಯುವಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಕ್ರೂರ ಘಟನೆ ಉತ್ತರ ಪ್ರದೇಶದ ಎತಾದಲ್ಲಿನ ಗಲ್ಲಾ ಮಂಡಿಯಿಂದ ವರದಿಯಾಗಿದೆ.  ಮನೆಯವರೆಲ್ಲರೂ ಮದುವೆ ಸಡಗರ-ಸಂಭ್ರಮದಲ್ಲಿದ್ದಾಗ, ಸೋನು ಎಂಬ ಆರೋಪಿಯು ಬಾಲಕಿಯನ್ನು ಪುಸಲಾಯಿಸಿ ಹತ್ತಿರದ ನಿರ್ಮಾಣ ಹಂತದಲ್ಲಿದ್ದ ಕಟ್ಟಡಕ್ಕೆ ಕರೆದೊಯ್ಡು ಆತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪೆÇಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ