ಕಠ್ಮಂಡುವಿನ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ

ಕಠಮಂಡು;ಏ-17: ನೇಪಾಳ ರಾಜಧಾನಿ ಕಠ್ಮಂಡುವಿನ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಕಟ್ಟಡದ ಮುಂಭಾಗದಲ್ಲಿ ಗೋಡೆಗೆ ಹಾನಿಯುಂಟಾಗಿದೆ.

ಸೋಮವಾರ ತಡರಾತ್ರಿ ಭಾರತೀಯ ರಾಯಭಾರಿ ಕಚೇರಿಯ ಸಮೀಪ ಬಾಂಬ್ ಸ್ಫೋಟಗೊಂಡಿದ್ದು, ಕಟ್ಟಡದ ಮುಂಭಾಗದಲ್ಲಿದ್ದ ಗೋಡೆ ಹಾನಿಗೊಂಡಿದೆ ಎಂದು ಮೊರಂಗ್ ಎಸ್’ಪಿ ಅರುಣ್ ಕುಮಾರ್ ಬಿಸಿ ಹೇಳಿದ್ದಾರೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಕೆಲ ಸ್ಥಳೀಯ ಗುಂಪುಗಳು ಸ್ಫೋಟಿಸಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ನಿನ್ನೆಯಷ್ಟೇ ನೇಪಾಳದಲ್ಲಿರುವ ಪಕ್ಷವೊಂದು ಬಿರತ್ ನಗರದಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿರುವ ಹಿನ್ನಯೆಲ್ಲಿ ಸ್ತಳದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಇದೀಗ ಭಾರತೀಯ ಅಧಿಕಾರಿಗಳು ನೇಪಾಳ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

Bomb blast, outside Indian consulate office, in Nepal

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ