ಮಕ್ಕಳ ಮೇಲಿನ ಲೈಂಗಿಕ ದುರಾಚಾರಗಳನ್ನು ತಡೆಗಟ್ಟುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ  ಸರ್ಕಾರ ವಿಫಲ:

ನವದೆಹಲಿ, ಏ.17-ಮಕ್ಕಳ ಮೇಲಿನ ಲೈಂಗಿಕ ದುರಾಚಾರಗಳನ್ನು ತಡೆಗಟ್ಟುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ  ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಸಂಸದ ಮತ್ತು ಖ್ಯಾತ ಉದ್ಯಮಿ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.
ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸಂಘದ ಅಂಕಿ ಅಂಶಗಳನ್ನು ಉಲ್ಲೇಖಿಸಿರುವ ರಾಜ್ಯಸಭಾ ಸದಸ್ಯರ ರಾಜೀವ್, ಕಳೆದ ಐದು ವರ್ಷಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು 10 ಪಟ್ಟು ಹೆಚ್ಚಾಗಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೆÇೀಕ್ಸೊ) ಅಡಿ 2012-13ರಲ್ಲಿ 138 ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷ ಆ ಸಂಖ್ಯೆ 1,420ರಷ್ಟಿದೆ. ಇಂಥ ಪ್ರಕರಣಗಳಲ್ಲಿ ಶೇ.93ಕ್ಕೂ ಹೆಚ್ಚು ಕೇಸುಗಳು ಈಗಲೂ ವಿಚಾರಣೆಗಾಗಿ ಬಾಕಿ ಉಳಿದಿವೆ ಎಂದು ರಾಜೀವ್ ಚಂದ್ರಶೇಖರ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ