ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ:

ದಾವಣಗೆರೆ, ಏ.17- ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿನ್ನೀಕಟ್ಟೆ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಹನುಮಂತ (22), ಹನುಮಂತ (26) ಮೃತಪಟ್ಟ ದುರ್ದೈವಿಗಳು.
ಕೆಲಸದ ನಿಮಿತ್ತ ಸಾವಳಂಗದಿಂದ ಚಿಮ್ಮನಕಟ್ಟೆಗೆ ಇಬ್ಬರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಶಿವಮೊಗ್ಗ , ಶಿಕಾರಿಪುರ ಹೆದ್ದಾರಿಯ ಚಿನ್ನೀಕಟ್ಟೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಚಾರ ಅಸ್ತವ್ಯಸ್ತ: ಅಪಘಾತ ನಡೆದು ಕೆಲ ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಸಂಬಂಧ ನ್ಯಾಮತಿ ಠಾಣೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ