ಎಂಇಪಿ 2ನೇ ಮತ್ತು ಕೊನೆ ಪಟ್ಟಿ : 75 ಅಭ್ಯರ್ಥಿಗಳ ಹೆಸರುಗಳು ಬಿಡುಗಡೆ

ಬೆಂಗಳೂರು ಏ.18- ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿರುವ ಆಲ್ ಇಂಡಿಯಾ ಮಹಿಳಾ ಎಂಪವರ್ ಮೆಂಟ್ ಪಾರ್ಟಿ ಇಂದು ೨ನೇ ಪಟ್ಟಿ ಬಿಡುಗಡೆ ಮಾಡಿದೆ

ನಗರದ ಲೀಲಾ ಪ್ಯಾಲೇಸ್ ಹೊಟೇಲ್ ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಕ್ 10 ಜಿಲ್ಲೆಗಳ 75 ಅಭ್ಯರ್ಥಿಗಳ 2ನೇ  ಮತ್ತು ಅಂತಿಮ ಪಟ್ಟಿ ಬಿಡುಗಡೆ ಮಾಡಿದರು

ಬಳಿಕ ಮಾತನಾಡಿದ ಅವರು,  224 ಕ್ಷೇತ್ರಗಳ ಪೈಕಿ ಮಹಿಳೆಯರಿಗೆ 35ರಿಂದ ೪೦ ಸ್ಥಾನ ನೀಡಲಾಗಿದೆ ಇದರ ಜೊತೆಗೆ ರೈತರಿಗೆ ೮ ಕ್ಷೇತ್ರಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದರು.

ನಮ್ಮ ಸಮೀಕ್ಷೆ ಪ್ರಕಾರ 100ಸ್ಥಾನಗಳನ್ನು ಪಡೆಯಲಿದೆ ಎಂದು ಅಂದಾಜು ಮಾಡಲಾಗಿತ್ತು ಆದರೆ ಕಾರ್ಯಕರ್ತರ ಉತ್ಸಾಹ ಹೆಚ್ಚಾಗುತ್ತಿದೆ ರಾಜ್ಯದ ಮಹಿಳೆಯರು ಎಂಇಪಿ ಪರ ಒಲವು ತೋರುತ್ತಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಎಂಇಪಿ 150 ಸ್ಥಾನ ಗಳಿಸಿ ಯಾರ ಹಂಗು ಇಲ್ಲದೆ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಕೆಲಸ ಮಾಡಿದವರಿಗೆ ಟಿಕೆಟ್ ಕೊಡುವ ಸಂಪ್ರದಾಯ, ನೀತಿ ನಮ್ಮದು. ಜನರು ಶಾಸಕರನ್ನು ಆಯ್ಕೆ ಮಾಡುತ್ತಾರೆ ಬಳಿಕೆ ಶಾಸಕರು ಸಭೆ ಸೇರಿ ಸಿಎಂ ಆಯ್ಕೆ ಮಾಡುತ್ತಾರೆ.

2-3ದಿನಗಳಲ್ಲಿ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡುತ್ತೇನೆ. ಇದೇ 26ರಿಂದ ಮೇ 8ರವರೆಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ, ಪ್ರಚಾರ ಕೈಗೊಳ್ಳುತ್ತೇನೆ.

ಬಿಗ್ ಬಾಸ್ ಖ್ಯಾತಿಯ ನರ್ಸ್ ಜಯಲಕ್ಷ್ಮಿ ಬಿಟಿಎಂ ಲೇಔಟ್ ಕ್ಷೇತ್ರದಿಂದ, ಗುರುಮಲ್ಲೇಶ್ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ, ಶಶಿಕಲಾ ಮೈಸೂರಿನ ವರುಣಾ ಕ್ಷೇತ್ರದಿಂದ, ಸೈಯದ್ ಅಸ್ಲಾಂ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ.

ನಾಳೆಯಿಂದಲೇ ಎಲ್ಲ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ ಮಾಡಲಾಗುವುದು ಎಂದು ಡಾ.ನೌಹೀರಾ ಶೇಕ್ ಹೇಳಿದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ