ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18-ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ ಬೆಳಿಗ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಚನ್ನಪಟ್ಟಣ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳೆರಡರಲ್ಲೂ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದ ಕುಮಾರಸ್ವಾಮಿ ಅವರು, ಮೊದಲಿಗೆ ಚನ್ನಪಟ್ಟಣದಿಂದ ನಾಮಪತ್ರ ಸಲ್ಲಿಸುತ್ತಿದ್ದಾರೆ.

ರಾಮನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣದಿಂದಲೂ ಸ್ಪರ್ಧಿಸುವಂತೆ ಸ್ಥಳೀಯ ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ ಮಾಡುತ್ತಿದ್ದಾರೆ.

ಕುಮಾರಸ್ವಾಮಿ ಅವರ ಸ್ಪರ್ಧೆಯಿಂದ ಚನ್ನಪಟ್ಟಣ ಕ್ಷೇತ್ರದ ಚುನಾವಣಾ ಕಣದಲ್ಲಿ ಹೆಚ್ಚಿನ ಪೈಪೆÇೀಟಿ ಕಂಡು ಬರುತ್ತಿದೆ.

ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜು ಕೂಡ ನಾಳೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ