ಮಾಜಿ ಸಂಸದ, ನಟ ಶಶಿಕುಮಾರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

ಬೆಂಗಳೂರು:ಏ-19: ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ ಮುಂದುವರೆದಿದ್ದು, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಸಿಗದ ಆಕಾಂಕ್ಷಿಗಳು ಈಗ ಜೆಡಿಎಸ್ ನತ್ತ ಮುಖಮಾಡಿದ್ದಾರೆ. ನಟ ಶಶಿಕುಮಾರ್ ಹೊಸದುರ್ಗ ಟಿಕೆಟ್‌ಗಾಗಿ ಕಾಂಗ್ರೆಸ್ ಪಕ್ಷ ತೊರೆದು ಈಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಮಾಜಿ ಸಂಸದ ಹಾಗೂ ಚಿತ್ರನಟ ಶಶಿಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು ಜಾತ್ಯತೀತ ಜನತಾದಳವನ್ನು ಸೇರಿದ್ದಾರೆ. ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಿದ ಶಶಿಕುಮಾರ್, ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಶಾಲು ನೀಡುವ ಮೂಲಕ ದೇವೇಗೌಡರು ಶಶಿಕುಮಾರ್‌‌ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು.

ಹೊಸದುರ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಶಶಿಕುಮಾರ್‌‌ಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಅಸಮಧಾನಗೊಂಡು ಪಕ್ಷ ತೊರೆದಿದ್ದಾರೆ. ಜೆಡಿಎಸ್ ಹೊಸದುರ್ಗ ಟಿಕೆಟ್ ಭರವಸೆ ನೀಡಿದ್ದರಿಂದ ಜೆಡಿಎಸ್ ಸೇರಿದ್ದಾರೆ.

Kannada Actor Shashi Kumar, Joins, JD(S)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ