ಈ ವಾರ ತೆರೆಗೆ `ರುಕ್ಕು`

ಡಿಂಪಲ್ ಆರ್ಟ್ಸ್ ಲಾಂಛನದಲ್ಲಿ ರಾಜಣ್ಣ ಅವರು ನಿರ್ಮಿಸಿರುವ `ರುಕ್ಕು` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಬಸವರಾಜ್ ಬಳ್ಳಾರಿ ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದು ನಿರ್ದೇಶನವನ್ನು ಮಾಡಿರುವ ಈ ಚಿತ್ರಕ್ಕೆ ಎ.ಟಿ.ರವೀಶ್ ಸಂಗೀತ ನೀಡಿದ್ದಾರೆ. ಸತೀಶ್ ಬಾಬು ಈ ಚಿತ್ರಕ್ಕೆ ಹಿನ್ನಲೆ ಸಂಗೀತ ನೀಡಿದ್ದಾರೆ.
ಶ್ರೇಯಸ್ಸ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ತಾರಾಬಳಗದಲ್ಲಿ ವೇಗರಮ್ಯ, ತಿಲಕ್, ಸಾಧುಕೋಕಿಲ, ಸತ್ಯಜಿತ್, ಪದ್ಮಜಾರಾವ್ ಮುಂತಾದವರಿದ್ದಾರೆ. ರೇಣುಕುಮಾರ್ ಛಾಯಾಗ್ರಹಣ, ನಾಗೇಂದ್ರ ಅರಸ್ ಸಂಕಲನ, ಕುಮಾರ್ ಕಲಾ ನಿರ್ದೇಶನ, ತ್ರಿಭುವನ್, ರಾಮು, ಕಂಬಿರಾಜ್ ನೃತ್ಯ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೆಶನ ಈ ಚಿತ್ರಕ್ಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ