ಮೈಸೂರು, ಏ.19-ಬಾದಾಮಿ ಕ್ಷೇತ್ರದ ವಿಚಾರದಲ್ಲಿ ಗೊಂದಲ ಇರುವುದು ನಮಗೆ ಹೊರತು ನಿಮಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ವಿರುದ್ಧ ಗರಂ ಆದರು.
ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ವೇಳೆ ಬಾದಾಮಿ ವಿಷಯ ಎತ್ತುತ್ತಿದ್ದಂತೆ ಗರಂ ಆದರು. ಬಾದಾಮಿಯಲ್ಲಿ ನಾನು ಸ್ಪರ್ಧಿಸುವ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು. ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆ ಬೇಡವೆ ಎಂಬುದನ್ನು ವರಿಷ್ಠರೇ ನಿರ್ಧರಿಸುತ್ತಾರೆ ಎಂದು ಹೇಳಿದರು.
ನಾನು ಹೈಕಮಾಂಡ್ ಅಲ್ಲ ರಾಜ್ಯದ ಮುಖ್ಯಮಂತ್ರಿ ಅಷ್ಟೆ ಎಂದರು.
ಹಾಲಿ ಕೆಲವು ಶಾಸಕರಿಗೆ ಟಿಕೆಟ್ ನೀಡಿಲ್ಲವಲ್ಲ ಎಂಬ ವರದಿಗಾರರ ಪ್ರಶ್ನೆಗೆ ಹೈಕಮಾಂಡ್ ಈ ಕುರಿತು ಪರಿಶೀಲನೆ ನಡೆಸುತ್ತಿದೆ. ಜಗಳೂರು ಕ್ಷೇತ್ರದಿಂದ ರಾಜೇಶ್ಗೇ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಉಳಿದವರಿಗೆ ಟಿಕೆಟ್ ಕೊಡುವುದನ್ನು ರಾಹುಲ್ಗಾಂಧಿಯವರೇ ನಿರ್ಧರಿಸುತ್ತಾರೆ ಎಂದು ಉತ್ತರಿಸಿದರು.
ಈವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೋಗಲು ಸಾಧ್ಯವಾಗಿಲ್ಲದ ಕಡೆಗೆ ಹಾಗೂ ಪ್ರಬಲ ಪೈಪೆÇೀಟಿ ಇರುವೆಡೆಗೆ ಇಂದು ಪ್ರಚಾರಕ್ಕೆ ಹೋಗುತ್ತೇನೆ ಎಂದು ಸಿಎಂ ತಿಳಿಸಿದರು.
ಏ.24 ರಿಂದ ರಾಜ್ಯಾದ್ಯಂತ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳುವುದಾಗಿ ಸಿದ್ದರಾಮಯ್ಯ ಹೇಳಿದರು.