ನ್ಯಾಯಾಧೀಶರಿಗೆ ವಾಗ್ದಂಡನೆ ವಿಧಿಸುವ ಕುರಿತು ಸಂಸದರು ನೀಡುತ್ತಿರುವ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್:

ನವದೆಹಲಿ, ಏ.20-ನ್ಯಾಯಾಧೀಶರಿಗೆ ವಾಗ್ದಂಡನೆ ವಿಧಿಸುವ ಕುರಿತು ಸಂಸದರು ನೀಡುತ್ತಿರುವ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇದೊಂದು ದುರದೃಷ್ಟಕರ ಬೆಳವಣಿಗೆ ಎಂದು ವಿಷಾದ ವ್ಯಕ್ತಪಡಿಸಿದೆ.
ಇದರಿಂದ ನಾವೆಲ್ಲರೂ ತುಂಬಾ ವಿಚಲಿತರಾಗಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರನ್ನು ಒಳಗೊಂಡ ಪೀಠ ಹೇಳಿದೆ.
ನ್ಯಾಯಮೂರ್ತಿಗಳಿಗೆ ವಾಗ್ದಂಡನೆ ವಿಧಿಸುವ ಕುರಿತು ರಾಜಕಾರಣಿಗಳು ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿರುವ ವಿಷಯವನ್ನು ಅರ್ಜಿದಾರರ ಪರ ವಕೀಲರು ಪ್ರಸ್ತಾಪಿಸಿದ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಇದನ್ನು ದುರದೃಷ್ಟಕರ ಎಂದು ಬಣ್ಣಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಕಾರ್ಯನಿರ್ವಹಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ವಾಗ್ದಂಡನೆಗೆ ಸಜ್ಜಾಗಿರುವ ಸಂದರ್ಭದಲ್ಲೇ ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ