ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ನಡೆಸಿದ ದಾಳಿಯಲ್ಲಿ ಈವರೆಗೆ 4.13 ಕೋಟಿ ರೂ.ಗಳನ್ನು ವಶ:

ನವದೆಹಲಿ, ಏ.21-ಮೇ 12 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ನಡೆಸಿದ ದಾಳಿಯಲ್ಲಿ ಈವರೆಗೆ 4.13 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಕರೆನ್ಸಿಗಳಲ್ಲಿ ಶೇ.97ರಷ್ಟು 2000 ಮತ್ತು 500 ರೂ. ಮುಖಬೆಲೆಯ ನೋಟುಗಳಾಗಿವೆ.
ರಾಜಧಾನಿ ದೆಹಲಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಐಟಿ ಅಧಿಕಾರಿಗಳು ಕರ್ನಾಟಕದ ವಿವಿಧೆಡೆ ಅಕ್ರಮ ನೋಟು ಸಾಗಣೆ ದಂಧೆಗೆ ಕಡಿವಾಣ ಹಾಕುವ ಕಾರ್ಯ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ವಿವಿಧ ರಾಜ್ಯಗಳಲ್ಲಿ 2000 ಮತ್ತು 500 ರೂ. ಮುಖಬೆಲೆಯ ನಗದು ಅಭಾವ ಹಾಗೂ ಎಟಿಎಂಗಳಲ್ಲಿ ಹಣ ಖಾಲಿಯಾಗಿರುವ ಆತಂಕದ ಪರಿಸ್ಥಿತಿ ಹಿನ್ನೆಲೆಯಲ್ಲೇ ಕರ್ನಾಟಕದಲ್ಲಿ ವಶಪಡಿಸಿಕೊಳ್ಳಲಾದ ನೋಟುಗಳಲ್ಲಿ ಅಧಿಕ ಮುಖಬೆಲೆಯ ನೋಟುಗಳೇ ಶೇ.97ರಷ್ಟಿರುವುದು ಇಲ್ಲಿ ಗಮನಾರ್ಹ.
ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ತನಿಖಾ ಘಟಕ ಈಗಾಗಲೇ 4.13 ಕೋಟಿ ರೂ. ನಗದು ಹಾಗೂ 1.32 ಕೋಟಿ ರೂ. ಮೌಲ್ಯದ 4.52 ಕೆ.ಜಿ.ಚಿನ್ನಾಭರಣ ವಶಪಡಿಸಿಕೊಂಡಿದೆ ಎಂದು ಇಲಾಖೆ ಪ್ರತಿಕಾ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ