ಚುನಾವಣಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಜೆಡಿಎಸ್ ಆರೋಪ

ಬೆಂಗಳೂರು, ಏ.21-ಚುನಾವಣಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

ರಾಜ್ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ.ಕೆ.ಜಿ.ಜಗದೀಶ್ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರೇಖಾ ಅವರ ವಿರುದ್ಧ ಆರೋಪ ಮಾಡಿರುವ ಜೆಡಿಎಸ್ ಕಾನೂನು ಘಟಕ ಈ ಇಬ್ಬರು ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.

ಕಾಂಗ್ರೆಸ್ ಪಕ್ಷದ ಪರವಾಗಿ ವರ್ತಿಸುತ್ತಿರುವ ಚುನಾವಣಾಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಮುಖ್ಯಚುನಾವಣಾಧಿಕಾರಿಗಳ ಕಚೇರಿ ಮುಂದೆ ಜೆಡಿಎಸ್ ಕಾನೂನು ಘಟಕದ ಎಲ್ಲಾ ಪದಾಧಿಕಾರಿಗಳು ಧರಣಿ ನಡೆಸಲು ತೀರ್ಮಾನಿಸಿದ್ದಾರೆ.
ಇಂದು ಸಂಜೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮುಂದೆ ಪಕ್ಷಪಾತ ಮಾಡುತ್ತಿರುವ ಚುನಾವಣಾಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದೆ ಎಂದು ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ