
ಬೆಂಗಳೂರು, ಏ.22-ಕಾರು, ಮೋಟಾರ್ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಚಿಕ್ಕಜಾಲ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೆಣ್ಣೂರು ನಿವಾಸಿ ರಾಜೇಶ್(23) ಮೃತಪಟ್ಟ ಬೈಕ್ ಸವಾರ.
ಈತ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ನಾಗವಾರ ಫ್ಲೈ ಓವರ್ನಲ್ಲಿ ಬೆಳಗ್ಗೆ 7ರ ಸಮಯದಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ರಾಜೇಶ್ ಸ್ಥಳದಲ್ಲೇ ಮೃತಪಟ್ಟರೆ ಹಿಂಬದಿ ಕುಳಿತಿದ್ದವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ರಾಜೇಶ್ನ ಮೃತ ದೇಹವನ್ನು ಅಂಬೇಡ್ಕರ್ ಆಸ್ಪತ್ರೆಯಲ್ಲಿ ಇಡಲಾಗಿದೆ.
ಚಿಕ್ಕಜಾಲ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.