ಬೆಂಗಳೂರು,ಏ.22- ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಇಂದು ಬಿಜೆಪಿ ತೊರೆದು ಜೆಡಿಎಸ್ಗೆ ಸೇರ್ಪಡೆಯಾದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ರೇವು ನಾಯಕ್ ಬೆಳಮಗಿ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ವಿದ್ಯುಕ್ತವಾಗಿ ಜೆಡಿಎಸ್ಗೆ ಸೇರಿದರು.
ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿಂದು ಸೇರ್ಪಡೆಯಾದ ಬೆಳಮಗಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಯಿತು.