
ಹಾಸನ, ಏ.22-ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 77 ಲಕ್ಷ ರೂ.ಗಳನ್ನು ಹಾಸನ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ಚುನಾವಣಾಧಿಕಾರಿಗಳು ಹಣ ವಶಪಡಿಸಿಕೊಂಡಿದ್ದು, ಐಟಿ ಇಲಾಖೆಗೆ ಹಣ ವರ್ಗಾವಣೆ ಮಾಡಲಾಗಿದೆ. ಹಣ ತೆಗೆದುಕೊಂಡು ಹೋಗುತ್ತಿದ್ದವರು ಇದನ್ನು ಎಟಿಎಂಗೆ ಹಾಕಲು ಕೊಂಡೊಯ್ಯುತ್ತಿದ್ದುದಾಗಿ ಹೇಳಿಕೆ ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಹಣದ ಬಗ್ಗೆ ಯಾವುದೇ ಸೂಕ್ತ ದಾಖಲೆ ಇಲ್ಲ ಎನ್ನಲಾಗಿದೆ.