
ತುಮಕೂರು, ಏ.22-ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ. ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಶಿರಾನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಯಚಂದ್ರ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ.
ಏ.12 ರಂದು ಜಯಚಂದ್ರ ಅವರಿಂದ ನೀತಿ ಸಂಹಿತೆ ಉಲ್ಲಂಘನೆ ಕುರಿತು ಪತ್ರಿಕೆಗಳಲ್ಲಿ ವರದಿ ಬಂದಿತ್ತು. ಅಂದು ಜಯಚಂದ್ರ ಅವರು ಮತದಾರರಿಗೆ ಮನೆ ಕೊಡುವ ಆಮಿಷವೊಡ್ಡಿದ್ದರು. ನಾಲ್ಕು ಸಾವಿರ ಮನೆ ಹಂಚಿಕೆ ಹಾಗೂ 5 ಲಕ್ಷ ಸಹಾಯ ಧನ ಕೊಡಿಸುವುದಾಗಿ ಆಮಿಷವೊಡ್ಡಿದ್ದರು. ಇದನ್ನು ಉಲ್ಲೇಖಿಸಿ ಚುನಾವಣಾಧಿಕಾರಿಗಳು ನ್ಯಾಯಾಲಯಕ್ಕೆ ದೂರು ನೀಡಿದ್ದರು. ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿಕೊಂಡು ನೋಟೀಸ್ ನೀಡಲಾಗಿದೆ.
ಇಬ್ಬರು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ದೂರು:
ತುಮಕೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿಗಣೇಶ್, ಹಾಗೂ ಸುರೇಶ್‍ಗೌಡ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಲಾಗಿದೆ. ಚುನಾವಣಾಧಿಕಾರಿಯಿಂದ ಅನುಮತಿ ಪಡೆಯದೆ ಮೆರವಣಿಗೆಯಲ್ಲಿ ಸಾಗಿ ಬಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಪೆÇಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು. ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ನಗರ ಅಭ್ಯರ್ಥಿ ಜ್ಯೋತಿಗಣೇಶ್ ಹಾಗೂ ಸುರೇಶ್‍ಗೌಡ ಜಂಟಿಯಾಗಿ ಮೆರವಣಿಗೆ ನಡೆಸಿದ್ದರು. ಜ್ಯೋತಿಗಣೇಶ್ ಅನುಮತಿ ಪಡೆದಿದ್ದು, ಸುರೇಶ್‍ಗೌಡ ಅನುಮತಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಕೆ.ಮಣಿ ದೂರು ದಾಖಲಿಸಿದ್ದು, ತುಮಕೂರು ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.