ದೇವನಹಳ್ಳಿಯ ರಾಣಿ ಸರ್ಕಲ್ ಸಮೀಪದ ಚೆಕ್‍ಪೆÇೀಸ್ಟ್‍ನಲ್ಲಿ ತಪಾಸಣೆ ವೇಳೆ ಖಾಸಗಿ ಬಸ್‍ನಲ್ಲಿ ಸಾಗಿಸುತ್ತಿದ್ದ 42 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ವಶಾ

ಬೆಂಗಳೂರು, ಏ.22-ದೇವನಹಳ್ಳಿಯ ರಾಣಿ ಸರ್ಕಲ್ ಸಮೀಪದ ಚೆಕ್‍ಪೆÇೀಸ್ಟ್‍ನಲ್ಲಿ ತಪಾಸಣೆ ವೇಳೆ ಖಾಸಗಿ ಬಸ್‍ನಲ್ಲಿ ಸಾಗಿಸುತ್ತಿದ್ದ 42 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಈ ಸಂಬಂಧ ಬ್ಯಾಗ್‍ನಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಠಾಣೆ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹೈದರಾಬಾದ್‍ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‍ನ್ನು ಚುನಾವಣೆಗಾಗಿ ದೇವನಹಳ್ಳಿಯ ರಾಣಿ ಸರ್ಕಲ್ ಬಳಿ ನಿರ್ಮಿಸಿರುವ ಚೆಕ್‍ಪೆÇೀಸ್ಟ್‍ನಲ್ಲಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಈ ಹಣ ದೊರೆತಿದೆ.

ವಿಚಾರಣೆ ವೇಳೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಹಣಕ್ಕೆ ಯಾವುದೇ ದಾಖಲೆ ನೀಡದ ಕಾರಣ ಚುನಾವಣಾಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಚುನಾವಣಾ ಚೆಕ್‍ಪೆÇೀಸ್ಟ್‍ನಲ್ಲಿ ಮೊದಲು 52.53 ಲಕ್ಷ ನಂತರ 52.91 ಲಕ್ಷ ರೂ.ಗಳನ್ನು ಪತ್ತೆಹಚ್ಚಲಾಗಿತ್ತು. ಹೈದರಾಬಾದ್‍ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‍ಗಳಲ್ಲಿ ಈ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಚೆಕ್‍ಪೆÇೀಸ್ಟ್‍ನಲ್ಲಿ ಇದುವರೆಗೆ ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಈ ಸಂಜೆಗೆ ಪೆÇಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ