ಮೊಬೈಲ್‍ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆ

ಬೆಂಗಳೂರು, ಏ.23-ಮೊಬೈಲ್‍ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆಕೋರರು ದುಬಾರಿ ಬೆಲೆಯ ಮೊಬೈಲ್‍ನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆಂಗೇರಿ ಉಪನಗರದ 7ನೇ ಮುಖ್ಯರಸ್ತೆ, 4ನೇ ಕ್ರಾಸ್ ಮೂಲಕ ಆನಂದ್‍ಕುಮಾರ್ ಅವರು ರಾತ್ರಿ 10.30ರಲ್ಲಿ ಮೊಬೈಲ್‍ನಲ್ಲಿ ಮಾತನಾಡುತ್ತಾ ನಡೆದು ಹೋಗುತ್ತಿದ್ದರು.

ಈ ಸಂದರ್ಭದಲ್ಲಿ ಹಿಂದಿನಿಂದ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಆನಂದ್‍ಕುಮಾರ್ ಅವರ ಕೈಯಲ್ಲಿದ್ದ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಕೆಂಗೇರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ