ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ: ತಾರಾ ಪ್ರಚಾರಕರ ದಂಡೇ ಆಗಮನ

 

ಬೆಂಗಳೂರು, ಏ.23- ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಾರಾ ಪ್ರಚಾರಕರ ದಂಡೇ ಆಗಮಿಸಲಿದೆ.

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲದೆ, ಆಮ್ ಆದ್ಮಿ, ಎನ್‍ಸಿಪಿ, ಸಿಪಿಐ(ಎಂ), ಬಿಎಸ್‍ಪಿ ಪಕ್ಷಗಳ ನಾಯಕರು ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಭಾರತ ಚುನಾವಣಾ ಆಯೋಗದ ಅನುಮತಿಯನ್ನು ಆಯಾ ಪಕ್ಷಗಳು ಪಡೆದುಕೊಂಡಿವೆ. ಆಪ್ ಪಕ್ಷದಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಸೇರಿದಂತೆ 20 ಮಂದಿ ತಾರಾ ಪ್ರಚಾರಕರಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಆಯೋಗದ ಅನುಮತಿ ಪಡೆದಿದ್ದಾರೆ.

ಎನ್‍ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಶರದ್‍ಪವಾರ್ ಸೇರಿದಂತೆ 29 ಮಂದಿ ಆ ಪಕ್ಷದಿಂದ ತಾರಾ ಪ್ರಚಾರಕ್ಕಾಗಿ ಚುನಾವಣೆಯಲ್ಲಿ ಭಾಗವಹಿಸಲು ಆಯೋಗದ ಅನುಮತಿ ಪಡೆದುಕೊಳ್ಳಲಾಗಿದೆ.

ಸಿಪಿಐ(ಎಂ)ನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಮುಖಂಡರಾದ ಪ್ರಕಾಶ್ ಕಾರಟ್, ಬೃಂದಾ ಕಾರಟ್ ಸೇರಿದಂತೆ 15 ಮಂದಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ತೊಡಗಲಿದ್ದಾರೆ.
ಬಿಎಸ್‍ಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ ಸೇರಿದಂತೆ 40 ಮಂದಿ ತಾರಾ ಪ್ರಚಾರಕರು ತಮ್ಮ ಪಕ್ಷದ ಪರವಾಗಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ