ಮಹಾಭಿಯೋಗ ಪ್ರಸ್ತಾವನೆ: ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲು

ನವದೆಹಲಿ,ಏ.23- ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರ ದುರ್ನಡತೆ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಮಂಡಿಸಿದ ಮಹಾಭಿಯೋಗ ಪ್ರಸ್ತಾವನೆಯನ್ನು ಸೋಮವಾರ ಉಪರಾಷ್ಟ್ರಪತಿ ತಿರಸ್ಕರಸಿದ್ದಾರೆ.
ಇದರಿಂದ ಮುಖ್ಯ ನ್ಯಾಯಮೂರ್ತಿಗಳ ವಿರುದ್ದ ಮಹಾಭಿಯೋಗ ಮಂಡಿಸಲು ಮುಂದಾಗಿದ್ದ ಕಾಂಗ್ರೆಸ್‍ಗೆ ಭಾರೀ ಮುಖಭಂಗವಾಗಿದೆ.
ಮುಖ್ಯ ನ್ಯಾಯಮೂರ್ತಿಗಳ ವಿರುದ್ದ ವಿರೋಧ ಪಕ್ಷಗಳು ಮಂಡಿಸಿರುವ ಪ್ರಸ್ತಾವನೆ ರಾಜಕೀಯ ಪ್ರೇರಿತ ಹಾಗೂ ಪೂರ್ವಗ್ರಹ ಪೀಡಿತವಾಗಿದೆ ಎಂದು ರಾಜ್ಯಸಭೆಯ ಸಭಾಧ್ಯಕ್ಷರಾಗಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಮ್ಮ ಹೆಳಿಕೆಯಲ್ಲಿ ತಿಳಿಸಿದ್ದಾರೆ.
ಉಪರಾಷ್ಟ್ರಪತಿಗಳ ಈ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದರೆ ದೀಪಕ್ ಮಿಶ್ರ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ಕೆಳಗಿಳಿಯುವವರೆಗೂ ನಾನು ನ್ಯಾಯಾಲಯದ ಆವರಣಕ್ಕೆ ಕಾಲಿಡುವುದಿಲ್ಲ ಎಂದು ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಕಪೀಲ್ ಸಿಬಾಲ್ ಶಪತ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ