
ನಾಗಪುರ,ಏ.23: ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ.
ತಡಗೋನ್ ಗ್ರಾಮದಲ್ಲಿ ಗಾಡ್ಚಿರೋಲಿ ಪೊಲೀಸರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ 14 ಮಂದಿ ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಡಿಐಜಿ ಅನ್ಕುಶ್ ಶಿಂಧೆ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ 14 ನಕ್ಸಲರ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ.