ಮಾಧ್ಯಮಗಳ ಮುಂದೆ ವಿವಾದಾತ್ಮಕ ಹೇಳಿಕೆ ನೀಡಬೇಡಿ: ಬಿಜೆಪಿ ಜನಪ್ರತಿನಿಧಿಗಳಿಗೆ ಮೋದಿ ಎಚ್ಚರಿಕೆ

ಹೊಸದಿಲ್ಲಿ,ಏ.23: ಬಿಜೆಪಿಯ ಕೆಲವು ಸಂಸದರು, ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದು, ವಿವಾದಾತ್ಮಕ ಹೇಳಿಕೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರು, ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.

ನರೇಂದ್ರ ಮೋದಿ ಆಪ್ ಮೂಲಕ ಪಕ್ಷದ ಸಂಸದರು, ಶಾಸಕರಿಗೆ ಪ್ರಧಾನಿ ಸಲಹೆ ನೀಡಿದ್ದು, ಮಾಧ್ಯಮಗಳ ಎದುರು ಹೇಳಿಕೆ ನೀಡುವುದಕ್ಕೂ ಮುನ್ನ ಸ್ಪಷ್ಟತೆ ಇರಲಿ ಎಂದು ಸೂಚನೆ ನೀಡಿದ್ದಾರೆ.  ” ನಾವು ತಪ್ಪು ಮಾಡಿ ಮಾಧ್ಯಮಗಳಿಗೆ ಚರ್ಚೆಯ ಸರಕನ್ನು ಒದಗಿಸುತ್ತೇವೆ, ಕ್ಯಾಮರಾಗಳನ್ನು ನೋಡುತ್ತಿದ್ದಂತೆಯೇ ನಾವು ದೊಡ್ಡ ಸಮಾಜ ವಿಜ್ಞಾನಿಗಳು ಅಥವಾ ತಜ್ಞರು ಎಂಬಂತೆ ಹೇಳಿಕೆ ನೀಡಲು ಪ್ರಾರಂಭಿಸುತ್ತೇವೆ.  ಇದರಿಂದ ಆಗುವ ಪ್ರಮಾದವನ್ನು ಮಾಧ್ಯಮಗಳು ಬಳಸಿಕೊಳ್ಳುತ್ತವೆ, ಆದರೆ ಅದು ಮಾಧ್ಯಮಗಳ ತಪ್ಪೂ ಅಲ್ಲ, ಹೇಳಿಕೆ ನೀಡಬೇಕಾದರೆ ಸ್ಪಷ್ಟತೆ ಇರಲಿ ಎಂದು ಮೋದಿ ಪಕ್ಷದ ಶಾಸಕರು, ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಪಕ್ಷದ ಚುನಾಯಿತ ಪ್ರತಿನಿಧಿಗಳು ಜನರೊಂದಿಗೆ ನೇರವಾಗಿ ಸಂಪರ್ಕದಲ್ಲಿರುವುದರಿಂದ ಪಕ್ಷಕ್ಕೆ ಒಳಿತಾಗಲಿದೆ ಎಂದೂ ಪಕ್ಷದ ಜನಪ್ರತಿನಿಧಿಗಳ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ