ಬೆಂಗಳೂರು.ಏ,23- ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಪಿಸಿಸಿ ಕಾರ್ಮಿಕರ ಘಟಕ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಪ್ರಕಾಶಂ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಮಿಕ ಘಟಕ ಕಳೆದ 25 ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸುತ್ತಿದೆ. ವಿವಿಧ ಕಾರ್ಮಿಕ ವಿಭಾಗಗಳಿಂದ ಹಾಗೂ ಅಸಂಘಟಿತ ಕಾರ್ಮಿಕರು ಸೇರಿದಂತೆ ರಾಜ್ಯದ 30 ಜಿಲ್ಲೆಗಳು, 176 ತಾಲ್ಲೂಕುಗಳಲ್ಲಿ ಹಾಗೂ198 ಬಿಬಿಎಂಪಿ ವಾರ್ಡ್‍ಗಳಲ್ಲಿ ಕಾರ್ಮಿಕರ ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳು, ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾದಾಮಿಯಿಂದ ಸ್ಪರ್ಧಿಸುತ್ತಿರುವ ಸಿದ್ದರಾಮಯ್ಯ, ತುಮಕೂರಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಜಿ.ಪರಮೇಶ್ವರ್ ಅವರುಗಳು ಸೇರಿದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಾಗುವುದು ಎಂದು ತಿಳಿಸಿದರು.
ಚಲನಚಿತ್ರ ನಿರ್ಮಾಪಕ ಕೆ.ಮಂಜು ರಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಭೇಟಿ
ಬೆಂಗಳೂರು, ಏ.23-ಚಲನಚಿತ್ರ ನಿರ್ಮಾಪಕ ಕೆ.ಮಂಜು ಜೆಡಿಎಸ್ ಸೇರುವ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡಸಿದರು.
ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನವಾದ್ದರಿಂದ ಅಂತಿಮ ಗಳಿಗೆಯಲ್ಲಿ ಎ.ಮಂಜು ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಪದ್ಮನಾಭನಗರದಲ್ಲಿರುವ ಗೌಡರ ನಿವಾಸದಲ್ಲಿ ಮಾತುಕತೆ ನಡೆಸಿದ ಮಂಜು, ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. ಗೌಡರೊಂದಿಗೆ ನಡೆಸಿದ ಮಾತುಕತೆ ಫಲ ನೀಡಿದ್ದೇ ಆದರೆ ಚುನಾವಣಾ ಕಣಕ್ಕೆ ಮಂಜು ಇಳಿಯಲಿದ್ದಾರೆ.