ಮುದ್ರಣ ಮಾಧ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ – ಸಚಿವೆ ಸ್ಮತಿ ಇರಾನಿ

ನವದೆಹಲಿ, ಏ.23-ಮುದ್ರಣ ಮಾಧ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವೆ ಸ್ಮತಿ ಇರಾನಿ ಭರವಸೆ ನೀಡಿದ್ದಾರೆ.
ಬೃಹತ್, ಮಧ್ಯಮ ಮತ್ತು ಸಣ್ಣ ಪತ್ರಿಕೆಗಳನ್ನು ಪ್ರತಿನಿಧಿಸುವ ಇಂಡಿಯನ್ ನ್ಯೂಸ್‍ಪೇಪರ್ ಸೊಸೈಟಿ(ಐಎನ್‍ಎಸ್) ಅಧ್ಯಕ್ಷೆ ಅಖಿಲಾ ಉರಾಂಕರ್ ನೇತೃತ್ವದಲ್ಲಿ ಎಂಟು ಸದಸ್ಯರ ನಿಯೋಗವು ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮುದ್ರಣ ಮಾಧ್ಯಮ ಎದುರಿಸುತ್ತಿರುವ ಸವಾಲುಗಳ ಬಗ್ಗೆ ವಿವರಿಸಿದರು. ನ್ಯೂಸ್ ಪ್ರಿಂಟ್ (ಮುದ್ರಣ ಕಾಗದ) ಬೆಲೆ ಏರಿಕೆ, ಜಾಹೀರಾತುಗಳ ಇಳಿಮುಖ್ಯ ಮೊದಲಾದ ಸಮಸ್ಯೆಗಳನ್ನು ನಿಯೋಗವು ಸಚಿವರ ಗಮನಕ್ಕೆ ತಂದಿತು.  ಅಹವಾಲುಗಳನ್ನು ಸ್ವೀಕರಿಸಿದ ಸ್ಮೃತಿ ಇರಾನಿ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ