ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಂವಿಧಾನ ಮತ್ತು ದಲಿತರ ಮೇಲೆ ದಾಳಿಗಳು ನಡೆಯುತ್ತಿವೆ – ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ, ಏ.23-ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಂವಿಧಾನ ಮತ್ತು ದಲಿತರ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಇಂದು ಸಂವಿಧಾನ ಉಳಿಸಿ ರಾಷ್ಟ್ರವ್ಯಾಪಿ ಆಂದೋಲನಕ್ಕೆ ಚಾಲನೆ ನೀಡಿದರು.
2019ರ ಲೋಕಸಭೆ ಚುನಾವಣೆ ಮುನ್ನವೇ ದಲಿತ ಸಮುದಾಯವನ್ನು ಒಲೈಸುವ ಕಾಂಗ್ರೆಸ್ ಪ್ರಯತ್ನದ ಭಾಗವಾಗಿ ಇಂದಿನಿಂದ ಸಂವಿಧಾನ ಉಳಿಸಿ ಅಭಿಯಾನ ಆರಂಭಗೊಂಡಿದೆ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆ ವಿರೋಧಪಕ್ಷದ ನಾಯಕ ಗುಲಾಂ ನಬಿ ಅಜಾದ್, ಹಿರಿಯ ಧುರೀಣರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಮೊದಲಾದವರು ಭಾಗವಹಿಸಿದ್ದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಜಯಂತಿ ದಿನವಾದ ಮುಂದಿನ ಏಪ್ರಿಲ್ ವರ್ಷ 14ರವರೆಗೆ ದೇಶಾದ್ಯಂತ ಕಾಂಗ್ರೆಸ್ ಆಂದೋಲನ ಮುಂದುವರಿಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ