ಬಿ ವೈ ವಿಜಯೀಂದ್ರಗೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆ; ವರಿಷ್ಠರು ನಿರ್ಧಾರ ಪ್ರಕಟಿಸಿದರೂ ಪ್ರತಿಭಟನೆ ಮುಂದುವರೆಸಿರುವ ಬೆಂಬಲಿಗರು

ಮೈಸೂರು:ಏ-೨೪: ವರುಣ ವಿಧಾನಸಭೆ ಕ್ಷೇತ್ರದಿಂದ ಬಿ.ಎಸ್​ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸ್ಪಷ್ಟ ಪಡಿಒಸಿದ್ದರೂ ವಿಜಯೀಂದ್ರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ.

ವರುಣ ಅಭ್ಯರ್ಥಿಯ ಕುರಿತು ಬೆಳಗ್ಗಿನಿಂದಲೂ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಹಿರಿಯ ನಾಯಕರ ಸಭೆ ನಡೆಯಿತು. ಸಭೆ ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಬಿ.ಎಸ್.ಯಡಿಯೂರಪ್ಪ ಐತಿಹಾಸಿಕ ನಿರ್ಣಯ ಕೈಗೊಂಡಿದ್ದು, ಬಿಜೆಪಿ ಯಡಿಯೂರಪ್ಪನವರ ಪರವಾಗಿದೆ. ವಿಜಯೇಂದ್ರ ಮುಂದಿನ ದಿನಗಳಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಂದಿನ ಮುಖ್ಯಮಂತ್ರಿ. ವಿಜಯೇಂದ್ರ ಪಕ್ಷದ ಪರವಾಗಿ ಕೆಲಸ ಮಾಡಲಿದ್ದಾರೆ. ಜೊತೆಗೆ ಅವರನ್ನು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುವುದು ಎಂದರು.

ಬಿಜೆಪಿ ನಾಯಕರು ವಿಜಯೀಂದ್ರ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದರೂ ಪಟ್ಟು ಸಡಿಲಿಸದ ಬೆಂಬಲಿಗರು, ಮೈಸೂರಿನಲ್ಲಿ ಸ್ಥಳೀಯ ನಾಯಕರು, ಪಕ್ಷದ ಅಭ್ಯರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದಾರೆ. ಇನ್ನು ಎರಡು ಗಂಟೆ ಕಾಲ ಕಾದು, ವರಿಷ್ಠರ ತೀರ್ಮಾನ ಪ್ರಕಟಿಸಿದ ನಂತರ ಮುಂದಿನ ನಡೆ ನಿರ್ಧರಿಸಲಾಗುವುದು ಸ್ಥಳೀಯ ಮುಖಂಡರು ಗುಡುಗಿದ್ದಾರೆ.

ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಕೊನೆ ಗಳಿಗೆಯಲ್ಲಿ ಉಂಟಾದ ರಾಜಕೀಯ ಬದಲಾವಣೆಯಿಂದ ಬಿಎಸ್‌ವೈ ಪುತ್ರನಿಗೆ ವರುಣಾ ಟಿಕೆಟ್ ಕೈತಪ್ಪಿದೆ.

Assembly Election,BJP,BY Vijayendra,supportes protest

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ