ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟ ಒತ್ತಾಯ

ಬೆಂಗಳೂರು, ಏ.24- ಮಾಜಿ ಉಪಪ್ರಧಾನಿ ಹಾಗೂ ರಾಷ್ಟ್ರ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿದ್ದರಾಜು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಬು ಜಗಜೀವನ್ ರಾಮ್ ಅವರು ಉಪಪ್ರಧಾನಿಯಾಗಿ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದಾರೆ. ಅವರಿಗೆ ಭಾರತ ರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಹಾಗಾಗಿ ಭಾರತ ರತ್ನ ಘೋಷಿಸುವಂತೆ ಮನವಿ ಮಾಡಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೂ ಬಾಬು ಜಗಜೀವನ್ ರಾಮ್ ಅವರು ಭಾರತ ರತ್ನ ಪ್ರಶಸ್ತಿಗೆ ಅರ್ಹರಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರಕ್ಕೆ ನಿಷ್ಠಾವಂತ ಸೇವೆ ಸಲ್ಲಿಸಿದ ಅವರು ದಲಿತ ಪರ ಕಾಳಜಿ ಹೊಂದಿದ್ದರು ಎಂದು ಸ್ಮರಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂಸತ್ತಿನಲ್ಲಿ ಭಾರತ ರತ್ನ ನೀಡುವಂತೆ ಒತ್ತಾಯಿಸಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ