ಬಾದಾಮಿ ಕ್ಷೇತ್ರದಿಂದ ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಬಾದಾಮಿ,ಏ.24: ಮುಖ್ಯಮಂತ್ರಿ ಸ್ಪರ್ಧೆಯಿಂದಾಗಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮಂಗಳವಾರ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಬಾದಾಮಿ ಮಿನಿ ವಿಧಾನಕ್ಕೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು..

ತಹಸೀಲ್ದಾರ್ ಕಚೇರಿಯಲ್ಲಿ

ರಾಮುಲು ನಾಮಪತ್ರ ಸಲ್ಲಿಸುವ ವೇಳೆ ಕೇಂದ್ರ ಸಚಿವ ಪ್ರಕಾಶ ಜಾವ್ಡೇಕರ್, ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರರಾವ್, ಮಾಜಿ ಸಿಎಂಗಳಾದ ಯಡಿಯೂರಪ್ಪ, ಜಗದೀಶ ಶೆಟ್ಟರ ಹಾಗೂ ಮುಖಂಡರು ಉಪಸ್ಥಿತರಿದ್ದರು.

ಬಾದಾಮಿಯಲ್ಲಿ ಗೆಲುವು ನಮ್ಮದೆ: ನಾಮಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ್ದ ಶ್ರೀರಾಮುಲು, ಹೈಕಮಾಂಡ್ ಸೂಚನೆ ಮೇರೆಗೆ ಪಕ್ಷದ ಶಿಸ್ತಿನ ಸಿಪಾಯಿ ಕಾಯ೯ಕತ೯ನಾಗಿ ನಾಮಪತ್ರ ಸಲ್ಲಿಸಲು ಬಾದಾಮಿಗೆ ಬಂದಿದ್ದೇನೆ ಎಂದರು.

ಯಾವುದೇ ಲೆಕ್ಕಾಚಾರ ಹಾಕಿ ರಾಜಕಾರಣ ಮಾಡುವ ವ್ಯಕ್ತಿಗಳು ನಾವಲ್ಲ. ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಮೊದಲಿನಿಂದಲೂ ಗಟ್ಟಿಯಾಗಿರುವ ಕ್ಷೇತ್ರ. ತಾಯಿ ಬನಶಂಕರಿ ಆಶೀವಾ೯ದ ಸೇರಿದಂತೆ ಎಲ್ಲರ ಆಶೀರ್ವಾದದಿಂದ ಗೆಲುವು ಸಾಧಿಸುತ್ತೇನೆ.

ಬಾದಾಮಿ ಕ್ಷೇತ್ರದಲ್ಲಿ ಇದೊಂದು ಮಹಾಭಾರತ ಯುದ್ದ. ಈ ಯುದ್ದದಲ್ಲಿ ಗೆಲ್ಲೋದು ನಾವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ