ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರಿಂದು ಜೆಡಿಎಸ್ ಸೇರ್ಪಡೆ!

ಹಾನಗಲ್, ಏ.24-ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರಿಂದು ಜೆಡಿಎಸ್ ಸೇರ್ಪಡೆಯಾದರು.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಅವರು ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೊನೆ ಕ್ಷಣದವರೂ ಕಾದಿದ್ದರು. ಟಿಕೆಟ್ ದೊರೆಯದ ಕಾರಣ ಪಕ್ಷವನ್ನೇ ತೊರೆದು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದಿಂದ ಶ್ರೀನಿವಾಸ್ ಮಾನೆ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಬೇಸತ್ತ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆಯಾದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ