ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿ:ಏ-24: ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಹೈವೋಲ್ಟೇಜ್ ಕ್ಶೇತ್ರವಾಗಿ ಪರಿಣಮಿಸಿರುವ ಬಾದಾಮಿ ಕ್ಷೇತ್ರದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬಾದಾಮಿ ತಾಲೂಕು ಕಛೇರಿಗೆ ಕಾಂಗ್ರೆಸ್ ಮುಖಂಡರೊಂದಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ತಹಶಿಲ್ದಾರ್ ಬಳಿ ನಾಮಪತ್ರ ಸಲ್ಲಿಸಿದ್ದರು. ಇನ್ನು ಬಾದಾಮಿಯಲ್ಲಿ ಈಗಾಗಲೇ ಬಿಜೆಪಿಯಿಂದ ಬಿ ಶ್ರೀರಾಮುಲು ಅವರು ನಾಮಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಿಂದ ಕಣಕ್ಕಿಳಿದಿದ್ದು, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಆಡಳಿತಾರೂಡ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ತೀವ್ರ ಜಿದ್ದಾಜಿದ್ದಿನ ನ ಕಣವಾಗಿ ಮಾರ್ಪಟ್ಟಿದೆ.

Karnataka assembly election,CM Siddaramaiah,file nomination,Badami

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ