ಕೈ ತೆಕ್ಕೆಗೆ ಜಿಲ್ಲೆಯ ಬಿಜೆಪಿ ಮಾಜಿ ಸಂಸದರು

ರಾಯಚೂರು:ಏ-25: ಮಾಜಿ ಸಂಸದರಾದ ಕೆ.ವಿರುಪಾಕ್ಷಪ್ಪ , ಕೊಪ್ಪಳ ಸಂಸದ ಶಿವರಾಮೇಗೌಡ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೆರ್ಪಡೆ
ಯಾದರು

ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಂಸದರನ್ನು ಕಾಂಗ್ರೆಸ್ ಗೆ ತರುವಲ್ಲಿ ಶಾಸಕ ಹಂಪನಗೌಡ ಹಾಗೂ ಶಿವರಾಜ ತಂಗಡಗಿ ಯಶಸ್ವಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ವಿರೂಪಾಕ್ಷಪ್ಪ ಅವರು ಕಾಂಗ್ರೆಸ್​ ಪಕ್ಷಕ್ಕೆ ಸೇರಿದ್ದಾರೆ. ಇದರಿಂದಾಗಿ ಸಿಂಧನೂರು ಕ್ಷೇತ್ರದಲ್ಲಿ ಬಿಜೆಪಿಗೆ ಭಾರಿ ನಷ್ಟವಾಗಿದೆ.

ಈ ಹಿಂದೆ ವಿರೂಪಾಕ್ಷಪ್ಪ ಅವರ ಅಣ್ಣನ ಮಗ ಕೆ. ಕರಿಯಪ್ಪ ಅವರು ಬಿಎಸ್​ಆರ್​ ಪಕ್ಷದಿಂದ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋತಿದ್ದರು. ಆ ನಂತರ ಅವರು ಕಾಂಗ್ರೆಸ್​ಗೆ ಸೇರಿದ್ದರು. ಈಗ ವಿರೂಪಾಕ್ಷಪ್ಪ ಅವರು ಕಾಂಗ್ರೆಸ್​ಗೆ ತೆಕ್ಕೆಗೆ ಸೇರಿದ್ದಾರೆ.

Assembly Election,BJP Leaders,Join Congress

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ