ಬೆಂಗಳೂರು, ಏ.25-ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಏ.27ಕ್ಕೆ ಮುಂದೂಡಿದೆ.
ಈ ಪ್ರಕರಣದ ಪ್ರಾಥಮಿಕ ವಿಚಾರಣೆ ಆಲಿಸಿದ ನ್ಯಾಯಮೂರ್ತಿಗಳಾದ ಎಚ್.ಜಿ.ರಮೇಶ್ ಮತ್ತು ಶ್ರೀನಿವಾಸ್ ಗೌಡ ಅವರಿದ್ದ ಪೀಠ ವಿಚಾರಣೆಯನ್ನು 27ಕ್ಕೆ ಮುಂದೂಡಿದೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಅವರನ್ನು ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು. ಅದನ್ನು ಪ್ರಶ್ನಿಸಿ ಅವರು ಸಿಎಟಿ ಮೊರೆ ಹೋಗಿದ್ದರು. ಮೊದಲು ತಡೆ ನೀಡಿದ್ದ ಸಿಎಟಿ, ನಂತರ ಸರ್ಕಾರದ ಆದೇಶ ಎತ್ತಿಹಿಡಿದಿತ್ತು.
ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣಿಯವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಾಥಮಿಕ ವಿಚಾರಣೆ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು 27ಕ್ಕೆ ಮುಂದೂಡಿದೆ.