ಬಿಎಸ್‍ಪಿ ಮೈತ್ರಿಯೊಂದಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಎಸ್ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ:

ಮೈಸೂರು, ಏ.25- ಬಿಎಸ್‍ಪಿ ಮೈತ್ರಿಯೊಂದಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಎಸ್ ಮೈಸೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಎಸ್‍ಪಿ ಮತ್ತು ಜೆಡಿಎಸ್‍ನ ಜಂಟಿ ಬಹಿರಂಗ ಸಭೆಯಲ್ಲಿ ಬಿಎಸ್‍ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಪಾಲ್ಗೊಳ್ಳಲಿದ್ದು, ಇದಕ್ಕಾಗಿ ನಗರದೆಲ್ಲೆಡೆ ಜೆಡಿಎಸ್, ಬಿಎಸ್‍ಪಿ ಕಟೌಟ್‍ಗಳು, ಬ್ಯಾನರ್‍ಗಳು ರಾರಾಜಿಸುತ್ತಿವೆ.
ದಲಿತರ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ಇಂದು ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದು, ನಗರದೆಲ್ಲೆಡೆ ಜೆಡಿಎಸ್-ಬಿಎಸ್‍ಪಿಯ ಪ್ರಚಾರದ ಅಬ್ಬರ ಕಾಣಸಿಗುತ್ತಿದೆ.  ಈ ಬೃಹತ್ ಸಭೆಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಜೆಡಿಎಸ್ ಪ್ರಚಾರ ಸಮಿತಿಯ ಎಚ್.ವಿಶ್ವನಾಥ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ.  ಇದರೊಂದಿಗೆ ಜೆಡಿಎಸ್, ಬಿಎಸ್‍ಪಿ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು, ಉಭಯ ಪಕ್ಷಗಳ ನಾಯಕರು ಪಾಲ್ಗೊಂಡು ಪ್ರಚಾರ ನಡೆಸಲಿದ್ದು, ಶಕ್ತಿ ಪ್ರದರ್ಶನದ ವೇದಿಕೆ ಇದಾಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ