ಬೆಂಗಳೂರು,ಏ.25-ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಮೇ 1ರಂದು ಟ್ರೇಡ್ ಯೂನಿಯನ್ ಕೋ-ಆರ್ಡಿನೇಷನ್ ಸೆಂಟರ್ ವತಿಯಿಂದ ಬೆಳಗ್ಗೆ 10.30ಕ್ಕೆ ಮೈಸೂರು ಬ್ಯಾಂಕ್ ವೃತ್ತದಿಂದ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದವರೆಗೂ ಮೆರವಣಿಗೆ ನಡೆಸಿ ನಂತರ ನಿರ್ಣಯಗಳನ್ನು ಮಂಡನೆ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಜಿ.ಆರ್.ಶಿವಶಂಕರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಹುರಾಷ್ಟ್ರೀಯ ಕಂಪನಿಗಳು, ಕಾಪೆರ್Çೀರೇಟ ಕಂಪನಿಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸದ ಅವಧಿ ವೇತನ,ಕೆಲಸದ ಅಭದ್ರತೆ, ಸಾಮಾಜಿಕ ಭದ್ರತೆ ಇಲ್ಲದೆ ನಿರಂತರವಾಗಿ ಕಾರ್ಮಿಕರ ವರ್ಗ ಶೋಷಣೆಗೆ ಗುರಿಯಾಗಿದೆ ಎಂದರು.
ಮೇ 1ರಂದು ಮೈಸೂರು ಬ್ಯಾಂಕ್ ವೃತ್ತದಿಂದ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದವರೆಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಗುವುದು, ನಂತರ ಸಭೆಯಲ್ಲಿ ಖಾಯಂ ಹಾಗೂ ನಿರಂತರ ಸ್ವರೂಪದ ಕೆಲಸಗಳನ್ನು ಗುತ್ತಿಗೆ ಪದ್ಧತಿಯಲ್ಲಿ ನಿರ್ವಹಿಸುತ್ತಿರುವುದನ್ನು ರದ್ದುಪಡಿಸಿ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಆದೇಶಿಸಬೇಕು ಎಂದು ಒತ್ತಾಯಿಸಿದರು. ಬೋನಸ್, ಭವಿಷ್ಯ ನಿಧಿ ಪಾವತಿಗೆ ಇರುವ ಎಲ್ಲ ಮಿತಿ ಹಾಗೂ ಅರ್ಹತೆಗಳನ್ನು ತೆಗೆದು ಹಾಕಿ ಗ್ಯಾಚ್ಯುಟಿ ಮೊತ್ತವನ್ನು ಏರಿಸಬೇಕು. ಎಲ್ಲ ಕಾರ್ಮಿಕರಿಗೆ ನಿವೃತ್ತಿ ವೇತನ ನೀಡಬೇಕು.
ಕಾರ್ಮಿಕ ಕಾಯ್ದೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಹಾಗೂ ಕಾಪೆರ್Çೀರೇಟ್ ಕಂಪನಿಗಳಿಗೆ ಅನುಕೂಲವಾಗುವ ಕಾಯ್ದೆಗಳನ್ನು ಹಿಂಪಡೆಯಬೇಕು. ಕಾರ್ಮಿಕ ಕಾಯ್ದೆಗಳನ್ನು ಕಟ್ಟುನಿಟ್ಟು ಹಾಗೂ ಸಮರ್ಪಕವಾಗಿವೆ ಜಾರಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.