ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ:

ತಿ.ನರಸೀಪುರ,ಏ.26- ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದಲ್ಲಿ ನಡೆದಿದೆ.
ಚಂದ್ರಪ್ಪ ಎಂಬವರ ಪುತ್ರ ಭಾರ್ಗವ ಪೆಟ್ರೋಲ್ ಬಂಕ್ ಮಾಲೀಕಬನಾಗಿದ್ದ ದೀಪಕ್ ಕುಮಾರ್(26) ಆತ್ಮಹತ್ಯೆ ಮಾಡಿಕೊಂಡ ಯುವಕ.
ಈತನಿಗೆ ಕಳೆದ ಹಲವು ದಿನಗಳಿಂದ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ನೋವು ಸಹಿಸಲಾಗದೆ ಮನನೊಂದ ಈತ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಮಾತ್ರೆ ಸೇವಿಸಿ ಅಸ್ವಸ್ಥನಾಗಿದ್ದ.
ಕೂಡಲೇ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3ರ ಸಮಯದಲ್ಲಿ ಸಾವನ್ನಪ್ಪಿದ್ದಾನೆ.
ಈ ಸಂಬಂಧ ತಿ.ನರಸೀಪುರ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ