ಹುಮನಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಮತಯಾಚನೆ ಪ್ರಚಾರಕ್ಕೆ ಚಾಲನೆ

ಬೀದರ್, ಏ. 26- ಹುಮನಾಬಾದ್ ವಿಧಾನಸಭೆ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಸುಭಾಷ ಕಲ್ಲೂರ್ ಪ್ರಚಾರಕ್ಕೆ ಚಾಲನೆ ನೀಡಿದ್ದು, ಗುರುವಾರ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಮುಸ್ತಾಪುರ ಗ್ರಾಮಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿದ ಕಲ್ಲೂರ, ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತಕ್ಕೆ ಚಾಲನೆ ಸಿಕ್ಕಿದ್ದು, ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ ಮೂಲಕ ಇದು ಸಾಕಾರಗೊಳ್ಳಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದ್ದು, ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ಉತ್ತಮ ವಾತಾವರಣ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬೆಂಬಲಿಸಬೇಕು. ಬರುವ ದಿನಗಳಲ್ಲಿ ರಾಜ್ಯ, ರಾಷ್ಟ್ರ ನಾಯಕರು ಪ್ರಚಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.

ಪ್ರಮುಖರಾದ ಶಿವಾನಂದ ಮಂಠಾಳಕರ್, ಗುಂಡುರೆಡ್ಡಿ, ಪದ್ಮಾಕರ ಪಾಟೀಲ್, ಬಸವರಾಜ ಆರ್ಯ, ಸೋಮನಾಥ ಪಾಟೀಲ್, ಸೂರ್ಯಕಾಂತ ಮಠಪತಿ, ಜಹಿರೊದ್ದೀನ್ ಇತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ